ಬೆಂಗಳೂರು : ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರ ಮೂಲದ ರಿತೇಶ್ ಎಂಬಾತ ಹೊತ್ತೊಯ್ದು ಹತ್ಯೆಗೈದಿದ್ದನು. ಈ ಎನ್ ಕೌಂಟರ್ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿತ್ತು. ಇದೀಗ ಬಾಲಕಿ ಹತ್ಯೆ ಪ್ರಕರಣವನ್ನೂ ಸಿಐಡಿ ತನಿಖೆಗೆ ವರ್ಗಾಯಿಸಿ ಆದೇಶ ಹೊರಡಿಸಿದೆ.
ಇಡೀ ರಾಜ್ಯವೇ ಬೆಚ್ಚಿ ಬಿದ್ದಿದ್ದಂತ ಹುಬ್ಬಳ್ಳಿಯ 5 ವರ್ಷದ ಬಾಲಕಿ ಹತ್ಯೆ ಪ್ರಕರಣದ ಆರೋಪಿ ಬಿಹಾರ ಮೂಲದ ರಿತೇಶ್ ಬಂಧನಕ್ಕೆ ತೆರಳಿದ್ದಂತ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆಯಲ್ಲಿ ಪೊಲೀಸರು ಆತ್ಮ ರಕ್ಷಣೆಗಾಗಿ ಆರೋಪಿ ರಿತೇಶ್ ಗೆ ಗುಂಡೇಟು ನೀಡಿದ್ದರು. ಪಿಎಸ್ಐ ಅನ್ನಪೂರ್ಣ ಅವರು ಫೈರಿಂಗ್ ಮಾಡಿದಂತ ಗುಂಡು, ಆರೋಪಿ ರಿತೇಶ್ ಎದೆಗೆ ಬಿದ್ದಿತ್ತು. ಈ ಹಿನ್ನಲೆಯಲ್ಲಿ ಪೊಲೀಸರ ಫೈರಿಂಗ್ ನಲ್ಲಿ ಹುಬ್ಬಳ್ಳಿಯ 5 ವರ್ಷದ ಬಾಲಕಿ ಹತ್ಯೆ ಆರೋಪಿ ರಿತೇಶ್ ಸಾವನ್ನಪ್ಪಿದ್ದನು. ಈ ಪೊಲೀಸರ ಫೈರಿಂಗ್ ನಲ್ಲಿ ಆರೋಪಿ ರಿತೇಶ್ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿತ್ತು.








