ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಪ್ರಾಧಿಕಾರಕ್ಕೆ ಸಂಬಂಧಿಸಿದ 6 ತಿದ್ದುಪಡಿ ವಿಧೇಯಕಳನ್ನು ಮಂಡಿಸಲಾಗಿದೆ.
ಈ ಕುರಿತು ಸಚಿವ ಕೃಷ್ಣ ಬೈರೇಗೌಡ ಸದನಕ್ಕೆ ಮಾಹಿತಿ ನೀಡಿದ್ದು, ರಾಜ್ಯದ ಎಲ್ಲಾ ಪ್ರಾಧಿಕಾರಗಳ ಅಭಿವೃದ್ಧಿ ಕೆಲಸ ಸಕ್ರೀಯವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಬೇಕು ಎಂಬ ಉದ್ದೇಶದಿಂದ ಈ ಎಲ್ಲಾ ತಿದ್ದುಪಡಿ ವಿಧೇಯಕಗಳನ್ನೂ ಮಂಡಿಸಲಾಗಿದೆ. ಈ ಹಿಂದೆ ಒಂದೆರಡು ಅಭಿವೃದ್ಧಿ ಪ್ರಾಧಿಕಾರಗಳು ಇದ್ದವು, ಹೀಗಾಗಿ ಪ್ರಾಧಿಕಾರಗಳಿಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರಬೇಕು ಎಂಬ ನಿಯಮ ಇತ್ತು. ಆದರೆ, ಇಂದು ಪ್ರಾಧಿಕಾರಗಳ ಸಂಖ್ಯೆ ಅಧಿಕವಾಗಿದೆ.
ಮುಖ್ಯಮಂತ್ರಿಗಳಿಗೂ ಕೆಲಸದ ಒತ್ತಡ ಅಧಿಕವಾಗಿದ್ದು, ಈ ನಡುವೆ ಪ್ರಾಧಿಕಾರಗಳ ಅಭಿವೃದ್ಧಿಗೆ ಮುಖ್ಯಮಂತ್ರಿಗಳಿಂದ ಗಮನ ನೀಡುವುದು ಕಷ್ಟದ ವಿಚಾರ. ಹೀಗಾಗಿ ಎಲ್ಲಾ ಪ್ರಾಧಿಕಾರಗಳ ಅಭಿವೃದ್ಧಿ ಕೆಲಸ ಸಕ್ರೀಯವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಬೇಕು ಎಂಬ ಉದ್ದೇಶದಿಂದ ಪ್ರಾಧಿಕಾರಗಳಿಗೆ ಮುಖ್ಯಮಂತ್ರಿ ಅಥವಾ ಇಲಾಖೆ ಸಚಿವರಾದ ಕಂದಾಯ ಸಚಿವರು ಅಥವಾ ಸರ್ಕಾರ ಸೂಚಿಸಿದ ಪ್ರಾಧಿಕಾರದ ಅಭಿವೃದ್ಧಿ ಬಗ್ಗೆ ಆಸಕ್ತಿ ಇರುವ ಯಾವುದೇ ಸಚಿವರನ್ನು ನೇಮಕ ಮಾಡಲು ಈ ತಿದ್ದುಪಡಿಯಲ್ಲಿ ಅವಕಾಶ ನೀಡಲು ಉದ್ದೇಶಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಇಂದು ಮಾಹಿತಿ ನೀಡಿದರು.
1) ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025
2) ನಾಡಪ್ರಭು ಕೆಂಪೆಗೌಡ ಪಾರಂಪರಿಕ ತಾಣ ಅಭಿವೃದ್ಧಿ ತಿದ್ದುಪಡಿ ವಿಧೇಯಕ – 2025
3) ಕಿತ್ತೂರು ಅಭಿವೃದ್ದಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025
4) ಕೂಡಲಸಂಗಮ ಅಭಿವೃದ್ದಿ ಮಂಡಳಿ ತಿದ್ದುಪಡಿ ವಿಧೇಯಕ – 2025
5) ಬನವಾಸಿ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025
6) ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ – 2025