ದಾವಣಗೆರೆ : ಇಂದು ದಾವಣಗೆರೆಯಲ್ಲಿ ಘೋರ ದುರಂತ ಒಂದು ನಡೆದಿದ್ದು, ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಪೋಟಗೊಂಡು, 6 ಜನರಿಗೆ ಗಾಯವಾಗಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ತುರ್ಚಗಟ್ಟೆ ಎಂಬ ಗ್ರಾಮದಲ್ಲಿ ಈ ಒಂದು ಅನಾಹುತ ನಡೆದಿದೆ.
ಹೌದು ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ಒಂದು ಅನಾಹುತ ಸಂಭವಿಸಿದ್ದು,ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆ ಮೇಲ್ಚಾವಣಿ ಸಂಪೂರ್ಣವಾಗಿ ಕುಸಿತಗೊಂಡಿದೆ. ಬೆಳಿಗ್ಗೆ ಸಿಲಿಂಡರ್ ಆನ್ ಮಾಡಲು ಹೋದಾಗ ಏಕಾಏಕಿ ಸ್ಪೋಟವಾಗಿದೆ.
ಈ ಒಂದು ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸಿಲಿಂಡರ್ ಸ್ಪೋಟಗೊಂಡ ಬಳಿಕ ಕೂಡಲೇ ಗಾಯಾಳುಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಘಟನೆ ಕುರಿತಂತೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿದೆ.