ಬೆಂಗಳೂರು : ಸಿಲಿಂಡರ್ ಒಂದು ಸ್ಫೋಟಗೊಂಡು ಆರು ಜನರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಬೆಂಗಳೂರಿನ ಯಲಹಂಕದ LBS ಬಳಿ ನಡೆದಿದೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಚನಕವಾಗಿದೆ ತಕ್ಷಣ ಅವರನ್ನ ಗಾಯಾಳುಗಳಿಗೆ ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳಿಗೆ ಡ್ಯಾಮೇಜ್ ಆಗಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನ ಯಲಹಂಕದ LBS ಲೇಔಟ್ ನಲ್ಲಿ ಈ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳು ಡ್ಯಾಮೇಜ್ ಆಗಿವೆ. ಮನೆಗಳು ಗೋಡೆಗಳು ಬಿರುಕು ಬಿಟ್ಟಿದ್ದು ಅನೇಕ ವಸ್ತುಗಳು ಪುಡಿ ಪುಡಿಯಾಗಿ ಬಿದ್ದಿವೆ.ಘಟನೆ ಕುರಿತಂತೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೆಟ್ರೋ ನಿಲ್ದಾಣ ಬಳಿ ಅಗ್ನಿ ಅವಘಡ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಘಟನೆ ಜರುಗಿದ್ದು ಬೆಂಗಳೂರಿನ ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ಅಗ್ನಿ ಅವಘಡ ಸಂಭವಿಸಿದ್ದು ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ನಾಲ್ಕು ಬೈಕ್ ಗಳಿಗೆ ಬೆಂಕಿಗೆ ಅಹುತಿಯಾಗಿರುವ ಘಟನೆ ನಡೆದಿದೆ.
ಮೆಟ್ರೋ ನಿಲ್ದಾಣ ಬಳಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದರಿಂದ ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿತು. ಘಟನೆ ಕುರಿತಂತೆ ರಾಜಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.