ಉತ್ತರಪ್ರದೇಶ : ಉತ್ತರ ಪ್ರದೇಶದ ಜೌನ್ಪುರದಲ್ಲಿ ಕಾರು ಹಾಗೂ ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಈ ಒಂದು ಘಟನೆಯಲ್ಲಿ 6 ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಮೂವರಿಗೆ ಗಂಭೀರವಾದಂತ ಗಾಯಗಳಾಗಿರುವ ದುರ್ಘಟನೆ ನಡೆದಿದೆ.
ಈಶ್ವರಪ್ಪ ಮಗನಿಗೆ ಟಿಕೆಟ್ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ
ಉತ್ತರ ಪ್ರದೇಶದ ಜಾನ್ಪುರ ಜಿಲ್ಲೆಯಲ್ಲಿ ಭಾನುವಾರ ಟ್ರಕ್ವೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಆರು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಗೌರಾ ಬಾದಶಾ ಪೊಲೀಸ್ ವೃತ್ತದ ವ್ಯಾಪ್ತಿಯ ಪ್ರಸಾದ್ ಕಾಲೇಜು ಬಳಿ ಭಾನುವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ನಾವು ಐದು ವರ್ಷಗಳಲ್ಲಿ ಮಾಡಿದ್ದನ್ನು ಮಾಡಲು ಕಾಂಗ್ರೆಸ್ 20 ವರ್ಷಗಳನ್ನು ತೆಗೆದುಕೊಳ್ಳುತ್ತಿತ್ತು: ಪ್ರಧಾನಿ ಮೋದಿ
ಪೊಲೀಸ್ ವರದಿ ಪ್ರಕಾರ, ಕಾರು ಯು-ಟರ್ನ್ ತೆಗೆದುಕೊಳ್ಳುತ್ತಿದ್ದಾಗ ಹಿಂದಿನಿಂದ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಮೃತರೆಲ್ಲರೂ ಬಿಹಾರದ ಸೀತಾಮರ್ಹಿ ಜಿಲ್ಲೆಯವರಾಗಿದ್ದು, ಮದುವೆ ಸಮಾರಂಭದಿಂದ ಹಿಂತಿರುಗುತ್ತಿದ್ದರು. ಮೃತರನ್ನು ಅನೀಶ್ ಶರ್ಮಾ, ಗಜಧರ್ ಶರ್ಮಾ, ಜವಾಹರ್ ಶರ್ಮಾ, ಗೌತಮ್ ಶರ್ಮಾ, ಸೋನಂ ಮತ್ತು ರಿಂಕು ಎಂದು ಗುರುತಿಸಲಾಗಿದೆ. ಗಾಯಗೊಂಡವರ ಹೆಸರು ಜಿತು ಶರ್ಮಾ, ಮೀನಾ ದೇವಿ ಮತ್ತು ಯುಗ್ ಶರ್ಮಾ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಯಡಿಯೂರಪ್ಪನವರೇ ನಿಮಗೆ ‘ಶೋಭಾ’ ಮುಖ್ಯನಾ? ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರು ಆಕ್ರೋಶ