ಚೆನ್ನೈ : ತಮಿಳುನಾಡಿನ ವಿರುದುನಗರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ ಸಂಭವಿಸಿದ್ದು, 6 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ತಮಿಳುನಾಡಿನ ವಿರುದುನಗರ ಜಿಲ್ಲೆಯ ಚತುರ್ ಬಳಿ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 6 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು,
ತಮಿಳುನಾಡಿನ ವಿರುದುನಗರ ಜಿಲ್ಲೆಯ ಸತ್ತೂರು ಪ್ರದೇಶದಲ್ಲಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯಕ್ಕೆ 6 ಜನರ ಶವ ಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾಎ.
ಅಪ್ಪಯ್ಯ ನಾಯಕನಪಟ್ಟಿಯಲ್ಲಿರುವ ಸಾಯಿನಾಥ್ ಎಂಬ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 4 ಕೊಠಡಿಗಳು ಧ್ವಂಸಗೊಂಡಿವೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅವಶೇಷಗಳಡಿ ಸಿಲುಕಿರುವ ಮತ್ತೊಬ್ಬನನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಆದರೆ, ಅವರೂ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಇದರಿಂದಾಗಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಅಪಘಾತದ ಕಾರಣದ ಬಗ್ಗೆ ಯಾವುದೇ ಸೂಕ್ತ ಮಾಹಿತಿ ಹೊರಬಿದ್ದಿಲ್ಲ. ಆದರೆ, ಪಟಾಕಿ ಸಿದ್ಧಪಡಿಸುವಾಗ ವಿದ್ಯುತ್ ಸೋರಿಕೆ ಅಥವಾ ಸಿಡಿಮದ್ದುಗಳ ನಡುವೆ ಘರ್ಷಣೆ ಉಂಟಾಗಿ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ.