ಬೆಂಗಳೂರು : ಮೈಸೂರು ಜಿಲ್ಲೆಯ ಕೆ.ಆರ್. ನಗರದ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಆರು ಮಂದಿ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾದ ವಿಚಾರ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಿ ತಮ್ಮವರನ್ನು ಕೂಡಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾದ ವಿಚಾರ ತಿಳಿದು ದುಃಖವಾಯಿತು.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ…
— CM of Karnataka (@CMofKarnataka) April 19, 2026








