ಗದಗ : ಗದಗದಲ್ಲಿ ಭೀಕರ ಸಿಲಿಂಡರ್ ಸ್ಪೋಟವಾಗಿದ್ದು, ಘಟನೆಯಲ್ಲಿ 14 ವರ್ಷದ ಬಾಲಕ ಸೇರಿ 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ,ಗದಗ ತಾಲೂಕಿನ ಹೊಸೂರು ಗ್ರಾಮದಲ್ಲಿ ಒಂದು ದುರಂತ ಸಂಭವಿಸಿದೆ.
ಸಿಲಿಂಡರ್ ಸ್ಫೋಟವಾಗಿ 6 ಜನರಿಗೆ ಗಂಭೀರವಾಗಿ ಗಾಯಗಳಾಗಿದೆ. ಬಸಪ್ಪ ಆದಿವರ್ ಎಂಬ ಅವರ ಮನೆಯಲ್ಲಿ ಸಿಲಿಂಡರ್ ಸ್ಫೋಟವಾಗಿದೆ. 14 ವರ್ಷದ ಬಾಲಕ ಸೇರಿ 6 ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಲಕ್ಷ್ಮವ್ವ ಕಣವಿ, ಬಸವಣ್ಣೆವ್ವ ಹೊರಪೇಟಿ, ಮಂಜುಳಾ, ನಿರ್ಮಲ ಹಾಗೂ ಶರಣಪ್ಪಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಫೋನ್ ಮಾಡಿದರು ಕೂಡ ಆಂಬುಲೆನ್ಸ್ ಮತ್ತು ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪ ಕೇಳಿ ಬಂದಿದೆ. ಘಟನೆ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.