ಚಿಕ್ಕಮಗಳೂರು : ಕರ್ನಾಟಕದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲೇ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಯಾದ ಬೆನ್ನಲ್ಲೇ ಇದೀಗ ನಕ್ಸಲರ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಿರುವ ಪೊಲೀಸರು ಇದೀಗ ಎಲ್ಲಾ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಾಳೆಹೊಳೆ ಕಳಸದ ವನಜಾಕ್ಷಿ, ಮುಂಡಗಾರು ಶೃಂಗೇರಿಯ ಲತಾ, ದಕ್ಷಿಣ ಕನ್ನಡದ ಕುಂತಲೂರಿನ ಸುಂದರಿ, ರಾಯಚೂರಿನ ಮಾರಪ್ಪೆ ಅರೋಳಿ, ತಮಿಳುನಾಡಿನ ವಸಂತ ಟಿ. ಕೇರಳದ ಎನ್.ಜೀಶಾ ಅವರು ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗಿದ್ದರು. ಇದೀಗ ಪೊಲೀಸರು ಅವರು ಸಂಗ್ರಹಿಸಿಟ್ಟಿದ್ದ ಶಸ್ತ್ರಾಸ್ತ್ರಗಳನ್ನು ಕೊಪ್ಪ ತಾಲೂಕಿನ ಮೇಗೂರು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ವಶಕ್ಕೆ ಪಡೆದುಕೊಂಡಿದ್ದಾರೆ.
ನಕ್ಸಲರಿಗೆ ವಿಶೇಷ ಪ್ಯಾಕೇಜ್ ಘೋಷಣೆ
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮುಂದೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತರಾಗಿದ್ದರು. ಹೀಗೆ ಶರಣಾದಂತ ಆರು ನಕ್ಸಲರಿಗೆ ಎಡಪಂಥೀಯ ತೀವ್ರಗಾಮಿಗಳ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿಯಲ್ಲಿ ತಲಾ 3 ಲಕ್ಷ ಸಹಾಯಧನವನ್ನು ಬಿಡುಗಡೆ ಮಾಡಿ ಆದೇಶಿಸಿದೆ.
ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮಂಜೂರಾತಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಎಡಪಂಥೀಯ ತೀವ್ರಗಾಮಿಗಳ ಶರಣಾಗತಿ ಮತ್ತು ಪುನರ್ ವಸತಿ ಯೋಜನೆಯಡಿಯಲ್ಲಿ ನಕ್ಸಲ್ ಚಟುವಟಿಕೆಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಶರಣಾಗತರಾದವರನ್ನು ಸರ್ಕಾರದಿಂದ ಘೋಷಣೆಯಾಗಿರುವ ಸೌಲಭ್ಯಗಳನ್ನು ಒದಗಿಸಲು ಉಲ್ಲೇಖ(1) ರ ಸರ್ಕಾರದ ಆದೇಶದಲ್ಲಿ ನಿರ್ದೇಶಿಸಲಾಗಿರುತ್ತದೆ ಎಂದಿದ್ದಾರೆ.