ಕೊಪ್ಪಳ : ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಬಾವಿಯಲ್ಲಿ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಶಾಲೆಯ ಮುಖ್ಯೋಪಾಧ್ಯಾಯ ಸೇರಿದಂತೆ ಆರು ಜನರನ್ನು ಕೊಪ್ಪಳದ ಡಿಡಿಪಿಐ ಶ್ರೀಶೈಲ್ ಬಿರಾದಾರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವನ್ನಪ್ಪಿದ. ಹಾಗಾಗಿ ಕರ್ತವ್ಯ ಲೋಪ ವ್ಯಸಗಿದ ಆರೋಪದ ಹಿನ್ನೆಲೆ 6 ಸರಕಾರಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಗಾಣದಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರನ್ನು ಇದೀಗ ಅಮಾನತು ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದ ಪ್ರಭಾರಿ ಮುಖ್ಯೋಪಾಧ್ಯಾಯ ಸೇರಿದಂತೆ ಆರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ಪ್ರವಾಸಕ್ಕೆ ಹೋಗಿದ್ದಾಗ ಬಾವಿಯಲ್ಲಿ ಬಿದ್ದು ನಿರುಪಾದಿ ಹರಿಜನ ಎನ್ನುವ ವಿದ್ಯಾರ್ಥಿ ಸಾವನ್ನಪ್ಪಿದ್ದ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದ. ಶಿಕ್ಷಕರ ನಿರ್ಲಕ್ಷದಿಂದ ವಿದ್ಯಾರ್ಥಿ ಸಾವನಪ್ಪಿದ್ದಾನೆ ಎಂದು ಆರೋಪದ ಅಡಿ ಇದೀಗ 6 ಶಿಕ್ಷಕರು ಅಮಾನತು ಮಾಡಲಾಗಿದೆ. ಅಮಾನತುಗೊಳಿಸಿ ಕೊಪ್ಪಳದ ಡಿಡಿಪಿಐ ಶ್ರೀಶೈಲ್ ಬಿರಾದರ್ ಈ ಕುರಿತು ಆದೇಶ ಹೊರಡಿಸಿದ್ದಾರೆ.