ಬೆಳಗಾವಿ : ನಿನ್ನೆ ಮಂಗಳೂರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ರಾಮಸೇನೆಯ ಕಾರ್ಯಕರ್ತರು ಪಾರ್ಲರ್ ಮೇಲೆ ದಾಳಿ ನಡೆಸಿ ಪೀಠೋಪಕರಣಗಳನ್ನು ನಾಶ ಮಾಡಿದ್ದರು. ಇದೀಗ ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮೇಲೆ ದಾಳಿ ಮಾಡಿದ ಪೊಲೀಸರು 6 ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಹೌದು ಬೆಳಗಾವಿಯಲ್ಲಿ ಸ್ಪಾ ಬ್ಯೂಟಿ ಪಾರ್ಲರ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ಅನಗೋಳಗೋಳದಲ್ಲಿರುವ ಅಂಜಲಿ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಮೇಲೆ ದಾಳಿ ಮಾಡಿದ್ದು ದಾಳಿಯ ವೇಳೆ ವೇಶ್ಯಾವಾಟಿಕೆ ನಡೆಸುತ್ತಿರುವುದು ಬಹಿರಂಗವಾಗಿದೆ.
ದಾಳಿಯ ವೇಳೆ 6 ಮಹಿಳೆಯರನ್ನು ಪೊಲೀಸರು ಇದೇ ಸಂದರ್ಭದಲ್ಲಿ ರಕ್ಷಣೆ ಮಾಡಿದ್ದಾರೆ. ಸ್ಪಾ ಮತ್ತು ಬ್ಯೂಟಿ ಪಾರ್ಲರ್ ಓನರ್ ಅಂಜಲಿ ಸಂಜಯ್ ಕಾಳೆ ಎನ್ನುವ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಬೆಳಗಾವಿಯ ಸೆಂಡ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.