ರಾಯಚೂರು : ರಾಯಚೂರಿನಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಬಹಿರ್ದೆಸೆಗೆ ಹೋದ ಸಂದರ್ಭದಲ್ಲಿ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿ ದಾಳಿ ಮಾಡಿದೆ. ಈ ವೇಳೆ ಚಿಕಿತ್ಸೆ ಫಲಿಸದೆ ಬಾಲಕ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಸಬಾ ಎಂಬ ಗ್ರಾಮದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಸಬಾ ಗ್ರಾಮದಲ್ಲಿ ಸಿದ್ದಪ್ಪ (6) ಎನ್ನುವ ಬಾಲಕ ನಿನ್ನೆ ಸಂಜೆ ಬಹಿರ್ದೆಸೆಗೆ ಎಂದು ತೆರಳಿದ್ದ ಈ ವೇಳೆ ಬೀದಿ ನಾಯಿ ಏಕಾಏಕಿ ದಾಳಿ ಮಾಡಿದೆ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇದೀಗ ಬಾಲಕ ಸಿದ್ದಪ್ಪ ಸಾವನಪ್ಪಿದ್ದಾನೆ.