ಗದಗ : ಗದಗದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಹರಿದು 6 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ.
ಗದಗ ತಾಲೂಕಿನ ಹರ್ತಿ ಗ್ರಾಮದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ತಾಯಿ ಜೊತೆ ಬಂದಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದಿದೆ. ಟಿಪ್ಪರ್ ಹರಿದ ಪರಿಣಾಮ ಹಿಂಡಸಗೇರಿ ಗ್ರಾಮದ ಪ್ರೀತಮ್ (6) ಎಂಬ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಗದಗ-ಲಕ್ಷ್ಮೇಶ್ವರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.