ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು,ಕಾಮುಕನೊಬ್ಬ ಅತ್ಯಾಚಾರ ಎಸಗಿ 6 ವರ್ಷದ ಮಗು ಹತ್ಯೆ ಮಾಡಿದ್ದಾನೆ.
ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ. ಬಾಲಕಿಯ ಪೋಷಕರು ಗಾರೆ ಕೆಲಸ ಮಾಡಿಕೊಂಡಿದ್ದಾರೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ ಎಂಬಾತ ಕೃತ್ಯವೆಸಗಿದ್ದಾನೆ. ಆತ ಕೂಡ ಗಾರೆ ಕೆಲಸ ಮಾಡಿಕೊಂಡಿದ್ದ. ಪೋಷಕರು ಇಲ್ಲದ ವೇಳೆಯಲ್ಲಿ ಬಾಲಕಿಯನ್ನು ಪುಸಲಾಯಿಸಿ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ 7:30ಕ್ಕೆ ಘಟನೆ ನಡೆದಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.