ಬೆಂಗಳೂರು: ಭ್ರಷ್ಟಾಚಾರ ಆರೋಪದ ವೀಡಿಯೋ ವೈರಲ್ ಆಗಿದ್ದರಿಂದ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಗೆ ಸಿಎಂ ಸಿದ್ಧರಾಮಯ್ಯ ರಾಜೀಮಾಮೆ ಕೊಟ್ಟು ಹೊರ ಹೋಗುವಂತೆ ಖಡಕ್ ಸೂಚಿಸಿದ್ದರು. ಈ ಬೆನ್ನಲ್ಲೇ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿ ಕುಮಾರ್ ಅವರು ನಿಗಮದ ಯೋಜನೆಗಳಡಿ ಸೌಲಭ್ಯ ನೀಡಲು ಫಲಾನುಭವಿಗಳಿಂದ ಶೇ.60ರಷ್ಟ ಲಂಚ ಕೇಳಿದ್ದಂತ ವೀಡಿಯೋ ವೈರಲ್ ಆಗಿತ್ತು. ಈ ವೈರಲ್ ವೀಡಿಯೋ ಗಮನಿಸಿದ್ದಂತ ಸಿಎಂ ಸಿದ್ಧರಾಮಯ್ಯ ಗರಂ ಆಗಿದ್ದರು. ಜೊತೆಗೆ ರಾಜೀನಾಮೆಗೂ ಸೂಚಿಸಿದ್ದರು. ಈ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ.
ಅಂದಹಾಗೇ ರವಿಕುಮಾರ್ ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸಿನಲ್ಲಿ ಶಿಸ್ತು, ಪಾರದರ್ಶಕತೆ ರೂಪಿಸಿದ್ದಕ್ಕೆ ನನ್ನ ವಿರುದ್ಧ ಈ ಷಡ್ಯಂತ್ರ ನಡೆದಿದೆ. ಇದಷ್ಟೇ ಅಲ್ಲದೇ ಎಐ ಬಳಸಿ ನನ್ನ ವಿರುದ್ಧ ಪಿತೂರು ಮಾಡಲಾಗಿದೆ. ನಿಗಮದ ಕಚೇರಿಯಲ್ಲಿಯೇ ವೀಡಿಯೋ ಶೂಟ್ ಮಾಡಲಾಗಿದೆ. ಹೀಗಾಗಿ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು ನೈತಿಕತೆ ಹೊಣೆ ಹೊತ್ತು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಭೋವಿ ಅಭಿವೃದ್ಧಿ ನಿಗಮದಿಂದ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಭೂಒಡೆತನ ಯೋಜನೆ ಜಾರಿಗೊಳಿಸಲಾಗಿದ್ದು, ಯೋಜನೆಯಡಿ 60 ಎಕರೆ ಖರೀದಿಸಿ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕಿತ್ತು. ಈ ಫಲಾನುಭವಿಗಳಿಂದ ಪ್ರತಿ ಘಟಕ ವೆಚ್ಛಕ್ಕೆ ಶೇಕಡ 40 ರಿಂದ 60ರಷ್ಟು ಕಮಿಷನ್ ನಿಗದಿ ಮಾಡಿರುವ ಆರೋಪ ಕೇಳಿ ಬಂದಿತ್ತು.. ಈ ಕುರಿತಾ ವಿಡಿಯೋ ವೈರಲ್ ಆಗಿದ್ದು, ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಎಸ್. ರವಿಕುಮಾರ್ ಅವರಿಗೆ ಸಿಎಂ ಸೂಚಿಸಿದ್ದರು. ತನಿಖೆಯಲ್ಲಿ ಆರೋಪ ಸಾಬೀತಾದರೆ ರಾಜೀನಾಮೆ ನೀಡುತ್ತೇನೆ ಎಂದು ಎಸ್. ರವಿಕುಮಾರ್ ಸಿಎಂಗೆ ತಿಳಿಸಿದ್ದು, ಇದನ್ನು ಒಪ್ಪದ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಸೂಚಿಸಿದ್ದರು.