ತುಮಕೂರು : ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಡಾ. ಸವಿತಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 6,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಡಾಕ್ಟರ್ ಸವಿತಾ ಕಣ್ಣಿನ ವೈದ್ಯರಾಗಿದ್ದಾರೆ.
ಉಪ್ಪಾರಹಳ್ಳಿ ಅವಿನಾಶ್ ತಾಯಿ ಕಣ್ಣಿಗೆ ಲೆನ್ಸ್ ಹಾಕಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸಿಬ್ಬಂದಿ ಮನೋಜ್ ಮೂಲಕ 6 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ್ದು, ರೆಡ್ ಹ್ಯಾಂಡ್ ಆಗಿ ಜಿಲ್ಲಾಸ್ಪತ್ರೆಗೆ ಸಿಬ್ಬಂದಿ ಮನೋಜ್ ಕೂಡ ಸಿಕ್ಕಿಬಿದ್ದಿದ್ದಾನೆ. ನಂತರ ವೈದ್ಯೆ ಸವಿತಾರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿ ವೈ ಎಸ್ ಪಿ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.








