ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ 69 ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯಾದ್ಯಂತ 69 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಿವಿಯ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೀದರ್ ಜಿಲ್ಲೆಯ 24 ಕಡೆ, ಬೆಂಗಳೂರಿನ 31 ಕಡೆ, ಕೊಪ್ಪಳ 2 ಕಡೆ, ಚಿಕ್ಕಮಗಳೂರು 2 ಕಡೆ, ಹಾಸನ, ರಾಮನಗರ, ಕೋಲಾರ, ಉಡುಪಿ ಸೇರಿದಂತೆ ರಾಜ್ಯಾದಂತ 69 ಕಡೆ ಲೋಕಾಯುಕ್ತ ದಾಳಿ ನಡೆದಿದೆ.