ಬೆಂಗಳೂರು : ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಸೀಟು ಹಂಚಿಕೆಯಾದವರು ಏ.16ರೊಳಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಸೂಚನೆ ನೀಡಲಾಗಿದೆ.
ಕರ್ನಾಟಕ ಪರಿಷಿಷ್ಟ ಪಂಗಡಗಳ ವಸತಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದವತಿಯಿಂದ ಕಾರ್ಯನಿರ್ವಹಿಸುತ್ತಿರುವ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳ ಮೆರಿಟ್ ಮತ್ತು ಅಭ್ಯರ್ಥಿಗಳು ದಾಖಲಿಸಿರುವ ಇಚ್ಛೆ / ಆಯ್ಕೆಗಳ ಆಧಾರದ ಮೇಲೆ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ದಿನಾಂಕ 11.04.2025ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ.
ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ದಿನಾಂಕ 16.04.2025ರ ಸಂಜೆ 5.30 ವರೆಗೆ ಸಂಬಂಧಿಸಿದ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದಾಗಿದೆ.