ಚಾಮರಾಜನಗರ : ನಿನ್ನೆ ಬೆಂಗಳೂರಲ್ಲಿ ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ದರೋಡೆ ನಡೆದಿದ್ದು, 7.11 ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಂಧ್ರಪ್ರದೇಶದ ತಿರುಪತಿಯಲ್ಲಿ ದರೋಡೆಕೋರರ ಕಾರು ಪತ್ತೆಯಾಗಿದೆ.
ಇದೀಗ ಈ ಒಂದು ದರೋಡೆಕೋರರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾಮರಾಜನಗರದಲ್ಲಿ ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ದರೋಡೆ ಕೋರರ ಸುಳಿವು ಪತ್ತೆಯಾಗಿದೆ. ದರೋಡೆಕರರು ಕೃತ್ಯಕ್ಕೆ ಬಳಸಿದ್ದ ಕಾರು ಪತ್ತೆಯಾಗಿದೆ ಎಂದು ಚಾಮರಾಜನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಇನ್ನೋವಾ ಕಾರು ಆಂಧ್ರಪ್ರದೇಶದ ಚಿತ್ತೂರು ಬಳಿ ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ಬೆಂಗಳೂರು ಪೊಲೀಸರು ಸದ್ಯ ವಶಕ್ಕೆ ಪಡೆದಿದ್ದಾರೆ. ತಿರುಪತಿಯಲ್ಲಿ ಕಾರು ಬಿಟ್ಟು ಆರೋಪಿಗಳು ಪರಾರಿ ಆಗಿದ್ದಾರೆ ದರೋಡೆಕೋರರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.








