ಬೆಂಗಳೂರು : ಬೆಂಗಳೂರಿನಲ್ಲಿ ತುಂತುರು ಮಳೆ ಹಾಗೂ ಇಬ್ಬನಿ ಜಾಸ್ತಿಯಾಗಿದ್ದರ ಪರಿಣಾಮ ಸರಣಿ ಅಪಘಾತವಾಗಿದೆ. ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಸರಣಿ ಅಪಘಾತ ನಡೆದಿದ್ದು, 7 ಕಾರುಗಳ ಮಧ್ಯೆ ಅಪಘಾತ ನಡೆದಿರುವ ಘಟನೆ ಬೆಂಗಳೂರಿನ ಯಲಹಂಕದ ಬಳಿ ನಡೆದಿದೆ.
ಹೌದು ಯಲಹಂಕ ತೆರಳುವ ಮುಖ್ಯ ರಸ್ತೆಯಲ್ಲಿ ವಾಹನಗಳ ನಡುವೆ ಅಪಘಾತ ನಡೆದಿದ್ದು,7 ಕಾರುಗಳ ನಡುವೆ ಸರಣಿ ಅಪಘಾತವಾಗಿದ್ದು, ಆದರೆ ಯಾವುದೇ ಹೆಚ್ಚು ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.ರಾತ್ರಿ ಸುರಿದ ಮಳೆಯಿಂದ ಕೂಡ ಹಲವಡೆ ಅವಾಂತರ ಸೃಷ್ಟಿಯಾಗಿದೆ.