ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡು 7 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಡೆದಿದೆ.
ಸಿಲಿಂಡರ್ ಬ್ಲಾಸ್ಟ್ ಘಟನೆಯಲ್ಲಿ , ದಿಜುಧಾರ್, ಅಂಜಲಿದಾಸ್, ಮನುಶ್ರೀ, ತಿಪ್ಪರುದ್ರಸ್ವಾಮಿ, ಮನು, ಶೋಭಾ, ಕರೀಬುಲ್ಲ ಎಂಬುವರು ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡ 7 ಜನರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಗೆ ನಿಖರವಾದಂತಹ ಕಾರಣ ತಿಳಿದು ಬಂದಿಲ್ಲ ಸದ್ಯ ಘಟನಾ ಸ್ಥಳಕ್ಕೆ ಪೀಣ್ಯ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.