ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿಭೇದಿಯಿಂದ ಏಳು ಮಂದಿ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸ 7 ಮಂದಿ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಕೊಳ್ಳೆಗಾಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಎರಡು ದಿನಗಳಿಂದ ಜನರಿಗೆ ವಾಂತಿಭೇದಿ ಶುರುವಾಗಿದೆ. ಸದ್ಯ ಪೈಪ್ ಲೈನ ನೀರಿನ ಪೂರೈಕೆ ಸ್ಥಗಿಗೊಳಿಸಲಾಗಿದ್ದು, ಟ್ಯಾಂಕರ್ ಮೂಲಕ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.