Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

BIG NEWS: ​’ಕಡಿಮೆ ವಿದ್ಯಾರ್ಹತೆಯ ಹುದ್ದೆಗೆ ಅತಿಯಾದ ಅರ್ಹತೆ ಹೊಂದಿದವರು ಹಕ್ಕು ಸಾಧಿಸುವಂತಿಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

BIG NEWS : ದೇಶದಲ್ಲೇ ಮೊದಲ ಬಾರಿಗೆ ಜನರ ದೂರು ಕೇಳಲು 2 ಹೊಸ ಸಚಿವಾಲಯ ಸ್ಥಾಪನೆ : ಸಿಎಂ ಡಿಕೆಶಿ ಘೋಷಣೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪೊಲೀಸರ ಮಕ್ಕಳಿಗಾಗಿ ರಾಜ್ಯದಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ : CM ಸಿದ್ದರಾಮಯ್ಯ ಘೋಷಣೆ
KARNATAKA

BREAKING : ಪೊಲೀಸರ ಮಕ್ಕಳಿಗಾಗಿ ರಾಜ್ಯದಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ : CM ಸಿದ್ದರಾಮಯ್ಯ ಘೋಷಣೆ

By kannadanewsnow57

ಬೆಂಗಳೂರು : ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು. ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಿಸಿದರು.

ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ ಕಾಪಾಡುವ ಹೊತ್ತಲ್ಲಿ ಇವರೆಲ್ಲಾ ಹುತಾತ್ಮರಾಗಿದ್ದಾರೆ ಎಂದರು.

ದೇಶದಲ್ಲಿ ಆಂತರಿಕ ಭದ್ರತೆ ಕಾಪಾಡುವಲ್ಲಿ, ದೌರ್ಜನ್ಯ, ಅಪರಾಧ, ದುರಂತಗಳನ್ನು ತಡೆಯುವುದರಲ್ಲಿ ಪ್ರಮುಖ ಪಾತ್ರ ವಹಿಸುವುದು ನಮ್ಮ ಪೊಲೀಸ್ ಸಿಬ್ಬಂದಿ. ಹೀಗಾಗಿ ಇವರ ಜವಾಬ್ದಾರಿ ಬಹಳ ದೊಡ್ಡದು ಎಂದರು.

ಅಸಮಾನತೆ ಇರುವ ಸಮಾಜದಲ್ಲಿ ಶೋಷಣೆ, ದೌರ್ಜನ್ಯಗಳೂ ಇರುತ್ತವೆ. ಈ ಶೋಷಿತರ ಸಂವಿಧಾನಬದ್ದವಾದ ಹಕ್ಕುಗಳನ್ನು ಕಾಪಾಡಲು ಮುಖ್ಯ ಪಾತ್ರ ವಹಿಸುವವರು ನಮ್ಮ ಪೊಲೀಸರು. ಇವರ ಜೊತೆಗೆ ಸರ್ಕಾರ ಇರುತ್ತದೆ ಎಂದರು. ಅಪರಾಧ ತಡೆಯಲು 6000 ಸಾವಿರ ಸಿಸಿ ಕ್ಯಾಮರಾಗಳು, 260 ಕ್ಕೂ ಹೆಚ್ಚು ಹೆದ್ದಾರಿ ಗಸ್ತು ವಾಹನಗಳು ಕರ್ತವ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ಗೃಹ ಸಚಿವ ಜಿ.ಪರಮೇಶ್ವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅತೀಕ್ ಎಲ್.ಕೆ., ಗೃಹ ಕಾರ್ಯದರ್ಶಿ ಉಮಾಶಂಕರ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಕಾನೂನು ಸುವ್ಯವಸ್ಥೆಯಿಂದ ಜಿಡಿಪಿ

ಕಾನೂನು ಸುವ್ಯವಸ್ಥೆಗೂ ದೇಶದ ಜನರ ಜಿಡಿಪಿಗೂ ನೇರಾ ನೇರ ಸಂಬಂಧ ಇರುವುದನ್ನು ಮುಖ್ಯಮಂತ್ರಿಗಳು ವಿವರಿಸಿದರು.

ಕಾನೂನು ಸುವ್ಯವಸ್ಥೆ ಸಮರ್ಪಕವಾಗಿದ್ದರೆ ಮಾತ್ರ ಬಂಡವಾಳ ಹೂಡಿಕೆ ಹೆಚ್ಚಾಗುತ್ತದೆ. ಹೂಡಿಕೆಯಿಂದ ಉದ್ಯೋಗ ಸೃಷ್ಟಿ ಹೆಚ್ಚಾಗುತ್ತದೆ. ಉದ್ಯೋಗ ಸೃಷ್ಟಿಯಿಂದ ಆರ್ಥಿಕತೆಯ ವೇಗ ಹೆಚ್ಚುತ್ತದೆ. ಆರ್ಥಿಕತೆಗೆ ವೇಗ ಬಂದರೆ ಅಭಿವೃದ್ಧಿ ಹೆಚ್ಚುತ್ತದೆ. ಅಭಿವೃದ್ಧಿ ಹೆಚ್ಚಾದರೆ ಜನರ ಜಿಡಿಪಿ, ತಲಾ ಆದಾಯವೂ ಹೆಚ್ಚುತ್ತದೆ ಎಂದರು.

BREAKING : ಪೊಲೀಸರ ಮಕ್ಕಳಿಗಾಗಿ ರಾಜ್ಯದಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ : CM ಸಿದ್ದರಾಮಯ್ಯ ಘೋಷಣೆ BREAKING: 7 public schools to be opened in state for policemen's children: CM Siddaramaiah announces
Share. Facebook Twitter LinkedIn WhatsApp Email

Related Posts

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

1 Min Read

BIG NEWS : ದೇಶದಲ್ಲೇ ಮೊದಲ ಬಾರಿಗೆ ಜನರ ದೂರು ಕೇಳಲು 2 ಹೊಸ ಸಚಿವಾಲಯ ಸ್ಥಾಪನೆ : ಸಿಎಂ ಡಿಕೆಶಿ ಘೋಷಣೆ.!

1 Min Read

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

2 Mins Read
Recent News

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

BIG NEWS: ​’ಕಡಿಮೆ ವಿದ್ಯಾರ್ಹತೆಯ ಹುದ್ದೆಗೆ ಅತಿಯಾದ ಅರ್ಹತೆ ಹೊಂದಿದವರು ಹಕ್ಕು ಸಾಧಿಸುವಂತಿಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

BIG NEWS : ದೇಶದಲ್ಲೇ ಮೊದಲ ಬಾರಿಗೆ ಜನರ ದೂರು ಕೇಳಲು 2 ಹೊಸ ಸಚಿವಾಲಯ ಸ್ಥಾಪನೆ : ಸಿಎಂ ಡಿಕೆಶಿ ಘೋಷಣೆ.!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

State News
KARNATAKA

ವಾಹನ ಸವಾರರಿಗೆ ಗುಡ್ ನ್ಯೂಸ್ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ

By kannadanewsnow57 KARNATAKA 1 Min Read

ಬೆಂಗಳೂರು: ನಿಮ್ಮ ವಾಹನದ ಮೇಲೆ ಹಳೇ ಟ್ರಾಫಿಕ್ ಫೈನ್ ಬಾಕಿ ಉಳಿದಿದೆಯೇ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ! ನಿಯಮ ಉಲ್ಲಂಘನೆ…

BIG NEWS : ದೇಶದಲ್ಲೇ ಮೊದಲ ಬಾರಿಗೆ ಜನರ ದೂರು ಕೇಳಲು 2 ಹೊಸ ಸಚಿವಾಲಯ ಸ್ಥಾಪನೆ : ಸಿಎಂ ಡಿಕೆಶಿ ಘೋಷಣೆ.!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ : ಅರ್ಜಿ ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.