ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬಳ್ಳಾರಿಯಲ್ಲಿ ಬಿಜೆಪಿ ಮುಖಂಡನೊಬ್ಬ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬರುತ್ತಿದೆ. ಬಳ್ಳಾರಿ ಜಿಲ್ಲೆಯ ಸಿರಾಗುಪ್ಪದಲ್ಲಿ ಬಿಜೆಪಿ ಮುಖಂಡ ದೇವು ನಾಯಕ ಎಂಬಾತನಿಂದ ಈ ಒಂದು ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ.
ಹೌದು ಬಿಜೆಪಿ ಯುವ ಮುಖಂಡನಿಂದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನಲ್ಲಿ ಈ ಒಂದು ದುಷ್ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಬಿಜೆಪಿ ಯುವ ಮುಖಂಡ ದೇವು ನಾಯಕ ಎಂಬಾತನಿಂದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಆಗಿರುವ ಆರೋಪ ಕೇಳಿ ಬರುತ್ತಿದೆ. 7 ವರ್ಷದ ಬಾಲಕಿಯ ಮೇಲೆ ದೇವು ನಾಯಕ್ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗುತ್ತಿದೆ.
ದೇವು ನಾಯಕ್ ಓರ್ವ ಮಹಿಳೆಯ ಸಹಾಯದಿಂದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಆರೋಪಿ ದೇವು ನಾಯಕ ನನ್ನು ಸದ್ಯಕ್ಕೆ ಸಿರಿಗೇರಿ ಪೊಲೀಸರು ವಶಕ್ಕೆ ಪಡೆಸಿಕೊಂಡಿದ್ದಾರೆ ಸಾಮಾಜಿಕ ಜಾಲತಾಣದಲ್ಲಿ ನಾಯಕರ ಜೊತೆಗಿನ ಫೋಟೋ ಪೋಸ್ಟ್ ಮಾಡಿದ್ದ ಬಿಜೆಪಿ ನಾಯಕರು ಜೊತೆಗಿನ ಫೋಟೋ ಹಂಚಿಕೊಂಡಿದ್ದ ಆರೋಪಿ ದೇವು ನಾಯಕ್ ಜಿಲ್ಲಾ ಪಂಚಾಯತ್ ಟಿಕೇಟ್ ಆಕಾಂಕ್ಷಿ ಎಂದು ಕೂಡ ಪೋಸ್ಟ್ ಹಾಕಿಕೊಂಡಿದ್ದ ಎಂದು ತಿಳಿದುಬಂದಿದೆ.