ಬೆಂಗಳೂರು : ಬೆಂಗಳೂರು ನಗರದಲ್ಲಿ ಏಳು ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸಿಎಂಎಸ್ ಮಾಜಿ ನೌಕರ ಝೆವಿಯರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆಂಧ್ರಪ್ರದೇಶದಲ್ಲಿ 5 ಕೋಟಿ 30 ಲಕ್ಷ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಎಂಎಸ್ ನ ಮಾಜಿ ನೌಕರ ಝೆವಿಯರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸ್ನೇಹಿತರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ.ಇನ್ನು ಉಳಿದ ಹಣದ ಸಮೇತ ಆರೋಪಿಗಳು ಪರಾರಿಯಾಗಿದ್ದು ಉಳಿದ ಹಣಕ್ಕಾಗಿ ಮತ್ತು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.








