ಬೆಂಗಳೂರು : ಇಂದು ದೇಶದಾದ್ಯಂತ 76ನೇ ಗಣರಾಜ್ಯೋತ್ಸವದ ಆಚರಣೆ ಸಂಭ್ರಮವಿದ್ದು, ಅದೇ ರೀತಿಯಾಗಿ ಇಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬೆಳಗ್ಗೆ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಈಗಾಗಲೇ ಮಾಣಿಕ್ಯಪ್ಪ ರೆಡ್ ಮೈದಾನದಲ್ಲಿ ಪೊಲೀಸರಿಂದ ಒದಗಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ. 10 ಕೆ.ಎಸ್.ಆರ್.ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷೀಪ್ರ ಕಾರ್ಯಚರಣೆ ತಂಡ, 8 ಡಿಸಿಪಿ, 17 ಎಸಿಪಿ, 44ಪಿಐ, ಸೇರಿ 1051 ಪೊಲೀಸರನ್ನು ಅನಿ ಯೋಜನೆ ಮಾಡಲಾಗಿದೆ. 114 ಪಿಎಸ್ಐ, 58 ಎಎಸ್ಐ, 80 ಪಿಸಿ, 30 ಕ್ಯಾಮೆರಾ ಸಿಬ್ಬಂದಿಯಿಂದ ಭದ್ರತೆ ಒದಗಿಸಲಾಗಿದೆ. ಅಲ್ಲದೆ ಮೈದಾನದ ಸುತ್ತಲೂ 103 ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ.