ನವದೆಹಲಿ : ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಉತ್ಸವದ ವೇಳೆ ಗೋಡೆ ಕುಸಿದು 8 ಮಂದಿ ಭಕ್ತರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಮೃತರ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
PMO tweets, "Deeply saddened by the loss of lives due to the collapse of a wall in Visakhapatnam, Andhra Pradesh. Condolences to those who have lost their loved ones. May the injured recover soon. An ex-gratia of Rs 2 lakh from PMNRF would be given to the next of kin of each… pic.twitter.com/rWIdifXqyF
— ANI (@ANI) April 30, 2025
ವಿಶಾಖಪಟ್ಟಣಂನ ಶ್ರೀ ವರಾಹಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ಚಂದನೋತ್ಸವ ಉತ್ಸವದ ಸಂದರ್ಭದಲ್ಲಿ 20 ಅಡಿ ಉದ್ದದ ಗೋಡೆ ಕುಸಿದು 8 ಜನರು ಸಾವನ್ನಪ್ಪಿದರು ಮತ್ತು ಹಲವರು ಗಾಯಗೊಂಡರು. ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್‌ನಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ.
#WATCH | Andhra Pradesh | Five people died and several got injured after a 20-foot-long stretch collapsed during the Chandanotsavam festival at the Sri Varahalakshmi Narasimha Swamy temple in Visakhapatnam. Search and rescue operations are underway by the SDRF and NDRF: SDRF pic.twitter.com/FSnATtoClw
— ANI (@ANI) April 30, 2025