ನೈನಿತಾಲ್ : ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಚೆಡಾಖಾನ್-ಮಿದಾರ್ ಮೋಟಾರು ರಸ್ತೆಯಲ್ಲಿ ಪಿಕ್ ಅಪ್ ವಾಹನವೊಂದು ಕಂದಕಕ್ಕೆ ಬಿದ್ದು ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಹನವು ಪಟ್ಲೋಟ್ ನಿಂದ ಅಮ್ಜದ್ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ನೈನಿತಾಲ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಹ್ಲಾದ್ ನಾರಾಯಣ್ ಮೀನಾ ತಿಳಿಸಿದ್ದಾರೆ.
ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮೋಟಾರ್ ಸೈಕಲ್ ಅನ್ನು ಉಳಿಸಲು ಪ್ರಯತ್ನಿಸುವಾಗ ವಾಹನವು ಕಮರಿಗೆ ಬಿದ್ದಿದೆ ಎಂದು ಅವರು ಹೇಳಿದರು. ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಲ್ಲಿ ದಂಪತಿ ಮತ್ತು ಅವರ ಮಗ ಕೂಡ ಸೇರಿದ್ದಾರೆ ಎಂದು ಎಸ್ಎಸ್ಪಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.