ತಮಿಳುನಾಡು : ಪೊಲೀಸರು ಹಾಗೂ ಸರ್ಕಾರ ಎಷ್ಟೇ ಕ್ರಮಗಳನ್ನು ಕೈಗೊಂಡರು ಕೂಡ ಸ್ಪೋಟ ಸಂಭವಿಸುತ್ತವೆ. ಇದೀಗ ತಮಿಳುನಾಡಿನ ಶಿವಕಾಶಿಯಲ್ಲಿರುವ ಚೆನ್ನಗಲಂಪಟ್ಟಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕೆಲಸ ಮಾಡುತ್ತಿದ್ದ 8 ಕಾರ್ಮಿಕರು ಸಾವನಪ್ಪಿದ್ದು ಇನ್ನೂ ಹಲವು ಕಾರ್ಮಿಕರಿಗೆ ಗಂಭೀರವಾದಂತಹ ಗಾಯಗಳಾಗಿವೆ.
ಘಟನೆಯಲ್ಲಿ ಬೆಂಕಿಯ ಕೆನ್ನಾಲಗೆ ಪಕ್ಕದ ಫ್ಯಾಕ್ಟರಿಗೆ ತಗಲುವ ಅಪಾಯವಿದ್ದು, ಸಿಬ್ಬಂದಿಗಳು ಅದನ್ನು ನಿಯಂತ್ರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಫ್ಯಾಕ್ಟರಿಯಲ್ಲಿ ಸಂಪೂರ್ಣ ಹೊಗೆ ತುಂಬಿಕೊಂಡಿರುವ ಕಾರಣ ಕಾರ್ಯಾಚರಣೆ ಕಷ್ಟವಾಗಿದೆ.
ಸ್ಫೋಟದ ಪರಿಣಾಮ ಇಡೀ ಫ್ಯಾಕ್ಟರಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.ಯಾವ ಕಾರಣಕ್ಕೆ
ಬೆಂಕಿ ಹೊತ್ತಿಕೊಂಡಿದೆ ಅನ್ನೋ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.