ನವದೆಹಲಿ : ಉತ್ತರ ಪ್ರದೇಶದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗುಡಿಸಲಿಗೆ ಲಾರಿ ನುಗ್ಗಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಹರ್ದೋಯ್ನಲ್ಲಿ ಮರಳು ಸಾಗಿಸುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿ ಪಲ್ಟಿಯಾಗಿದೆ. ಪರಿಣಾಮ ಒಂದೇ ಕುಟುಂಬದ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ
.ಟ್ರಕ್ ಪಲ್ಟಿಯಾದ ನಂತರ ಚೆಲ್ಲಿದ ಮರಳಿನ ಅಡಿಯಲ್ಲಿ ರಸ್ತೆ ಬದಿಯಲ್ಲಿ ವಾಸಿಸುತ್ತಿದ್ದ ಇಡೀ ಕುಟುಂಬ ಹೂತುಹೋಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.