ನಾರಾಯಣಪುರ : ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಎನ್ಕೌಂಟರ್ ನಡೆದಿದೆ. ಎನ್ಕೌಂಟರ್ನಲ್ಲಿ ಎಂಟು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಇಂದು ಬೆಳಗ್ಗೆ ನಾರಾಯಣಪುರ ಜಿಲ್ಲೆಯಲ್ಲಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ೮ ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.