ಶಿವಮೊಗ್ಗ : ರಾಜ್ಯದಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ 8 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಮೃತ ಬಾಲಕನನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದತ್ತರಾಜಪುರ ಗ್ರಾಮದ ರಚಿತ್ (8) ಎಂದು ತಿಳಿದುಬಂದಿದೆ. ಕಳೆದ 15 ದಿನಗಳ ಹಿಂದೆ ರಚಿತ್ ಹಾಗೂ ಆತನ ಸಹೋದರಿಗೆ ಮಂಗನ ಕಾಯಿಲೆ ಸೋಂಕು ತಗುಲಿತ್ತು. ಇಬ್ಬರನ್ನು ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಚೇತರಿಸಿಕೊಂಡ ರಚಿತ್ ಸಹೋದರಿಯನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ರಚಿತ್ ಮಣಿಪಾಲ ಆಸ್ಪತ್ರೆಯಲ್ಲಿ ಇಂದು ಸಾವನ್ನಪ್ಪಿದ್ದಾನೆ.