ಕೊಪ್ಪಳ : ಕೊಪ್ಪಳದಲ್ಲಿ ಭೀಕರವಾದಂತಹ ಅಪಘಾತ ನಡೆದಿದ್ದು, ಬೈಕ್ ಗೆ ಸರ್ಕಾರಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ 8 ವರ್ಷದ ಬಾಲಕಿ ಕೆಳಗೆ ಬಿದ್ದು ಬಸ್ ಅಡಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ನಡೆದಿದೆ.
ಹೌದು ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಶಾಲಾ ಬಾಲಕಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಯಲಬುರ್ಗಾದ ಜನತಾ ಕಾಲೋನಿಯ ನಿವಾಸಿಯಾದಂತಹ ಸಾನ್ವಿ (8) ಸಂಬಂಧಿ ಜೊತೆಗೆ ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಈ ಒಂದು ಘಟನೆ ನಡೆದಿದೆ.
ಸರ್ಕಾರಿ ಬಸ್ ಡಿಕ್ಕಿ ಹೊಡೆದಾಗ ಸಾನ್ವಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾಳೆ. ಈ ಸಂದರ್ಭದಲ್ಲಿ ಸರ್ಕಾರಿ ಬಸ್ ಟೈಯರ್ ಗೆ ಸಿಲುಕಿ ವಿದ್ಯಾರ್ಥಿನಿ ಸಾನ್ವಿ ಸಾವನ್ನಪ್ಪಿದ್ದಾಳೆ. ಘಟನೆ ಕುರಿದಂತೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.