ಬೆಂಗಳೂರು : ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬ್ 20 ರಿಂದ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅಧ್ಯಕ್ಷತೆಯಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಡೆದಿದ್ದು, ಸಭೆಯಲ್ಲಿ ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 20 ರಿಂದ ಮೂರು ದಿನಗಳವರೆಗೆ ನಡೆಸಲು ನಿರ್ಧರಿಸಲಾಗಿದೆ.