ಶಿವಮೊಗ್ಗ : ರಾಜ್ಯದಲ್ಲಿ ಡೆಂಘಿ ಅಬ್ಬರ ಮುಂದುವರೆದಿದ್ದು, ಇದೀಗ ಶಿವಮೊಗ್ಗದ ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಜ್ವರದಿಂದ ಬಳಲುತ್ತಿದ್ದ 9 ತಿಂಗಳ ಮಗುವೊಂದು ಸಾವನ್ನಪ್ಪಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಹೌದು ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಜ್ವರದಿಂದ ಬಳಲುತ್ತಿದ್ದ ಒಂಬತ್ತು ತಿಂಗಳ ಮಗುವೊಂದನ್ನು ಜು.2ರಂದು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗುವಿನ ಆರೋಗ್ಯದಲ್ಲಿ ಸುಧಾರಣೆ ಕಾಣದ ಕಾರಣ ನಂತರ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವಿಗೀಡಾಗಿದೆ.
ಇನ್ನೂ ಕಳೆದ ಎರಡು ದಿನಗಳ ಹಿಂದೆ ರಿಪ್ಪನ್ಪೇಟೆಯ ರಶ್ಮಿ ಆರ್.ನಾಯಕ್ (42), ಶಿರಾಳಕೊಪ್ಪದಲ್ಲಿ ಒಂಬತ್ತು ತಿಂಗಳ ಮಗು ಹಾಗೂ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಆಟೋ ಚಾಲಕ ಅರುಣ (22) ಮೃತಪಟ್ಟವರು. ಕಳೆದ ಹದಿನೈದು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ರಶ್ಮಿ ಅವರು ಮಂಗಳವಾರ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ ತೀವ್ರ ನಿಗಾ ಘಟಕದಲ್ಲಿದ್ದ ಚಿಕಿತ್ಸೆ ನೀಡಲಾಗುತ್ತಿತ್ತು. ರಶ್ಮಿ ಅವರಿಗೆ ಡೆಂಘೀ ದೃಢಪಟ್ಟಿದ್ದರೂ ಬೇರೆ ಆರೋಗ್ಯ ಸಮಸ್ಯೆಗಳಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ.