ಉತ್ತರ ಕನ್ನಡ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಎಲಯ ಯಲ್ಲಾಪುರ ತಾಳೂಕಿನ ಗುಳ್ಳಾಪುರ ಗ್ರಾಮದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಐಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತರಕಾರಿ ತುಂಬಿದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಈ ವೇಳೆ ಗುಳ್ಳಾಪುರ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರು ಹಾವೇರಿ ಜಿಲ್ಲೆಯ ಸವಣೂರು ಮೂಲದವರೆಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.