ದಾವಣಗೆರೆ: ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ಉ, ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ.
ದಾವಣಗೆರೆಯ ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ ಅಕ್ಷಯ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅಕ್ಷಯ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಸಂಭವಿಸುವ ಹಠಾತ್ ಸಾವನ್ನು ಇನ್ನು ಮುಂದೆ ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸಲು ಹಾಗೂ ಆಸ್ಪತ್ರೆಯಿಂದ ಹೊರಗೆ ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.