ಗದಗ : ರಾಜ್ಯದಲ್ಲಿ ಬೀದಿ ನಾಯಿಗಳ ದಾಳಿ ಮುಂದುವರೆದಿದ್ದು, ಇದೀಗ ಗದಗದಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಗಳು ಬಾಲಕಿಯ ಮೇಲೆ ಭೀಕರವಾದ ದಾಳಿ ನಡೆಸಿವೆ. ನಾಯಿಗಳ ದಾಳಿಯಿಂದ ಏಳು ವರ್ಷದ ಬಾಲಕಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡ ಬಾಲಕಿಯನ್ನು ಶ್ರೇಯ (7) ಎಂದು ತಿಳಿದುಬಂದಿದೆ.
ಗದಗ್ ಬಸ್ ನಿಲ್ದಾಣದ ಹಿಂಭಾಗದಲ್ಲಿ 7 ವರ್ಷದ ಬಾಲಕಿಯ ಮೇಲೆ ಏಕಾಏಕಿ ನಾಯಿಗಳು ದಾಳಿ ನಡೆಸಿವೆ. 7 ವರ್ಷದ ಬಾಲಕಿಯ ಆಟೋದಿಂದ ಇಳಿದು ಮನೆಗೆ ಹೋಗುತ್ತಿದ್ದಳು. ಈ ವೇಳೆ ಬಾಲಕಿಯ ಮೇಲೆ ಬೀದಿ ನಾಯಿಗಳು ಅಟ್ಯಾಕ್ ಮಾಡಿವೆ ತಲೆ ಕಣ್ಣು ಮುಖ ಮತ್ತು ಕೈಕಾಲು ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ. ನಾಯಿಗಳ ದಾಳಿಗೆ ಶ್ರೇಯ ತೀವ್ರವಾಗಿ ಗಾಯಗೊಂಡಿದ್ದಾಳೆ. ಸದ್ಯ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.