ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ಒಂದು ನಡೆದಿದ್ದು, ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ನೇಣು ಬಿಗಿದುಕೊಂಡು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಸಿಕೆ ಅಚ್ಚುಕಟ್ಟುವಿನಲ್ಲಿ ಒಂದು ಘಟನೆ ನಡೆದಿದೆ.
ಗಾಂಧಾರ್ (13) ಆತ್ಮಹತ್ಯೆಗೆ ಶರಣಾಗಿದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬೆಳಿಗ್ಗೆ ತಂದೆ ಬಾಲಕನ ರೂಮ್ಗೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕೆಗೆ ಬಂದಿದೆ. ಬಾಲಕನ ತಂದೆ ಮ್ಯೂಸಿಕ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿ ಆತ್ಮತೆಯ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸಿ.ಕೆ ಅಚ್ಚುಘಟ್ಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.