ಉತ್ತರಕನ್ನಡ : ಉತ್ತರ ಕನ್ನಡದಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲೀಸ್ ಗೆ ಪಡೆದ ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ನಗರಸಭೆಯ ಬಿಜೆಪಿ ಸದಸ್ಯ ಹಾಗೂ ನಗರಸಭೆಯ ಓರ್ವ ಅಧಿಕಾರಿ ವ್ಯಕ್ತಿಯೊರ್ವರ ಬಳಿ 3 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಹೌದು ಲೋಕಾಯುಕ್ತ ಬಲೆಗೆ ನಗರಸಭೆ ಸದಸ್ಯ ಹಾಗೂ ಓರ್ವ ಅಧಿಕಾರಿ ಬಲೆಗೆ ಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನಗರಸಭೆ ಸದಸ್ಯ ಹಾಗೂ ನಗರಸಭೆ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. 3 ಲಕ್ಷ ರೂಪಾಯಿ ಲಂಚ ಪಡೆಯುವಾಗ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲೀಸ್ ಗೆ ಪಡೆದ ಜಾಗದ ವಿಷಯಕ್ಕೆ ಸಂಬಂಧಿಸಿದಂತೆ ಲಂಚ ಸ್ವೀಕರಿಸಿದ್ದಾರೆ. ನಗರಸಭೆಯ ಹಾಲಿ ಬಿಜೆಪಿ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಗಣಪತಿ ನಾಯಕ್ ಹಾಗೂ ಅಧಿಕಾರಿ ಆರ್‌ಎಂ ವರ್ಣೇಕರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ರಮೇಶ್ ಹೆಗಡೆ ಎಂಬುವವರಿಂದ ಮೂರು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದರು ನಗರ ಸಭೆಯ ಪೈಪ್ ಕಳ್ಳತನ ಪರಕರಣದಲ್ಲೂ ಗಣಪತಿ ನಾಯಕ್ ಆರೋಪಿಯಾಗಿದ್ದಾನೆ. ಇಬ್ಬರನ್ನು ಬಂಧಿಸಿ ಸದ್ಯ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.