ಚಿಕ್ಕಮಗಳೂರು : ಮದ್ಯ ಸೇವಿಸಿ ಮನೆಯವರು ಬೈಯ್ತಾರೆ ಎಂದು ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಸಂಬಂಧಿಕರ ಮದುವೆಯಲ್ಲಿ ಬಾಲಕನಿಗೆ ಪಾರ್ಟಿಯಲ್ಲಿ ಎಣ್ಣೆ ಕುಡಿಸಿರುವ ಶಂಕೆ ವ್ಯಕ್ತವಾಗಿದ್ದು, ಎಣ್ಣೆ ಕುಡಿದಿರುವುದು ಮನೆಯಲ್ಲಿ ಗೊತ್ತಾದರೆ ಬಯ್ಯುತ್ತಾರೆ ಎಂಬ ಭಯಕ್ಕೆ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ನೇಣು ಬಿಗಿದುಕೊಂಡು ಪ್ರವಚನ್ (13) ಎನ್ನುವ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ.ಚಿಕ್ಕಮಂಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮೇಲ್ಪಾಲ್ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಗೆ ಶರಣಾದ ಪ್ರವಚನ್ ಮೇಲ್ಪಾಲ್ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ.ಕಳೆದ 4 ದಿನಗಳ ಹಿಂದೆ ಸಂಬಂಧಿಕರ ಮದುವೆಯಲ್ಲಿ ಬಾಲಕ ಪ್ರವಚನ್ ಗೆ ಪಾರ್ಟಿಯಲ್ಲಿ ಎಣ್ಣೆ ಕುಡಿಸಿರುವ ಶಂಕೆ ವ್ಯಕ್ತವಾಗಿದ್ದು ಮನೆಯಲ್ಲಿ ಎಣ್ಣೆ ಕುಡಿದಿರುವ ವಿಚಾರ ತಿಳಿದು ಬೈಯುತ್ತಾರೆ ಎಂದು ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.








