ಕರ್ನಾಟಕ-ಆಂಧ್ರಪ್ರದೇಶ ಗಡಿಯ ವಿಡುಪನಕಲ್ಲು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕರ್ನಾಟಕ ಮೂಲದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆಂಧ್ರಪ್ರದೇಶದ ವಿಡುಪನಕಲ್ಲು ಬಳಿ ಚಲಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಿಮ್ಸ್ ಆಸ್ಪತ್ರೆಯ ಅಂಕಾಲಜಿ ವಿಭಾಗದ ಗೋವಿಂದರಾಜುಲು, ಯೋಗೀಶ್, ವೆಂಕಟನಾಯ್ಡು ಮೃತಪಟ್ಟವರು ಎಂದು ಗುರಿತಿಸಲಾಗಿದೆ. ವೈದ್ಯ ಅಮರೇಗೌಡ ಪಾಟೀಲ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ನಡೆದ ಸ್ಥಳಕ್ಕೆ ಆಂಧ್ರಪ್ರದೇಶ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.