ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ನಿಯಂತ್ರಣ ತಪ್ಪಿ , ತುಂಗಾ ನದಿಗೆ ಕಾರೊಂದು ಉರುಳಿ ಬಿದ್ದಿದೆ. ಶೃಂಗೇರಿ ತಾಲೂಕಿನ ಗುಲಗಂಜಿ ಮನೆ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗುಲಗಂಜಿ ಮನೆ ಗ್ರಾಮದ ಬಳಿ ನಿಯಂತ್ರಣ ತಪ್ಪಿ ತುಂಗಾ ನದಿಗೆ ಕಾರು ಉರುಳಿ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದನವರಿಗೆ ಗಂಭೀರವಾಗಿ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಲ್ಲಿದ್ದವರು, ದಾವಣಗೆರೆ ಮೂಲದ ಪ್ರವಾಸಿಗರು ಎಂದು ತಿಳಿದುಬಂದಿದೆ.
ಅವರು ಶೃಂಗೇರಿ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದ್ದು, ಗಾಯಗೊಂಡ ನಾಲ್ವರು ಪ್ರವಾಸಿಗರಿಗೆ ಶೃಂಗೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.