ಬೆಂಗಳೂರು : ಕೋರಮಂಗಲದಲ್ಲಿರುವ ಜಿಎಸ್ ಸೂಟ್ಸ್ ಹೋಟೆಲ್ ಡಿಸ್ಪ್ಲೇ ಬೋರ್ಡ್ನಲ್ಲಿ ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿ ಅವಮಾನ ಮಾಡಿರು ಘಟನೆ ನಡೆದಿದೆ.ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಕನ್ನಡಿಗರ ಭಾವನೆಗಳಿಗೆ ಧಕ್ಕೆ, ಸಮಾಜದಲ್ಲಿ ಪರಸ್ಪರ ವೈ ಮನಸು ಸೃಷ್ಟಿ,ಹಾಗು ಶಾಂತಿ ಭಂಗ ಉಂಟು ಮಾಡಲು ಯತ್ನಿಸಿದ ಆರೋಪದ ಅಡಿ FIR ದಾಖಲಿಸಲಾಗಿದೆ.
ಹೌದು ಹೋಟೆಲ್ ನ ಡಿಸ್ಪ್ಲೇ ಬೋರ್ಡ್ ನಲ್ಲಿ ಕನ್ನಡಿಗರ ಬಗ್ಗೆ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಜಮ್ಶದ್ ಹಾಗು ಸರ್ಫರಾಜ್ ಎಂಬುವವರ ವಿರುದ್ಧ ಕಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಡಿವಾಳ ಸಬ್ ಇನ್ಸ್ಪೆಕ್ಟರ್ ರಮೇಶ್ ಹೂಗಾರ್ ದೂರಿನ ಮೇರೆಗೆ ಇಬ್ಬರ ವಿರುದ್ಧ ದಾಖಲಾಗಿದೆ. ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರಕರಣ ಹಿನ್ನೆಲೆ
ಮಡಿವಾಳ ಪೊಲೀಸ್ ಠಾಣೆ ಲಿಮಿಟ್ಸ್ ನಲ್ಲಿ ಬರುವ ಕೋರಮಂಗಲದಲ್ಲಿರುವ ಜಿಎಸ್ ಸೂಟ್ಸ್ ಹೋಟೆಲ್ ಡಿಸ್ಪ್ಲೇ ಬೋರ್ಡ್ನಲ್ಲಿ ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿ ಅವಮಾನ ಮಾಡಿರು ಘಟನೆ ನಡೆದಿದೆ. ಈ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದೆ.
ಬೋರ್ಡ್ ಮೇಲೆ “KANNAGIDA M***” ಎಂದು ಬರೆಯಲಾಗಿದ್ದು, ಇದು ಅತಿರೇಕದ ವರ್ತನೆಯಂತೆ ಕಂಡಿದೆ. ಡಿಸ್‌ಪ್ಲೇ ಬೋರ್ಡ್ ನಲ್ಲಿ ಕನ್ನಡಿಗರ ಬಗ್ಗೆ ಅವಾಚ್ಯ ಪದಗಳಿಂದ ಅವಹೇಳನ ಮಾಡಲಾಗಿದೆ. ನಿನ್ನೆ ರಾತ್ರಿ ಈ ಬರಹ ಕಂಡುಬಂದಿದೆ. ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
ಈ ಘಟನೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹೋಟೆಲ್ ನಲ್ಲಿ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬೋರ್ಡ್ನಲ್ಲಿ ಬೇಕಂತಲೇ ಈ ರೀತಿ ಬರೆದು ಹಾಕಿದ್ದಾರೆ ಎನ್ನಲಾಗ್ತಿದೆ. ಈ ಕುರಿತು ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ.