ಗದಗ : ಶಾಲೆಯಲ್ಲಿ ಸೀಲಿಂಗ್ ಗಾರೆ ಬಿದ್ದು ಇಬ್ಬರು ಮಕ್ಕಳು ಓರ್ವ ಶಿಕ್ಷಕನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಚಿಲಝರಿ ಎಂಬ ಗ್ರಾಮದಲ್ಲಿ ನಡೆದಿದೆ. ಚಿಲಝರಿ ಗ್ರಾಮದ ಹಿರಿಯ ಸರಕಾರಿ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಈ ಒಂದು ಅವಘಡ ಸಂಭವಿಸಿದೆ.
ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಎಂ.ಡಿ ಒಂಟಿ ಅವರಿಗೆ ಗಂಭೀರವಾದ ಗಾಯಗಳಾಗಿವೆ. ಪ್ರಾರ್ಥನೆಯ ಬಳಿಕೆ ಕೊಠಡಿಗೆ ಬಂದಾಗ ಸೀಲಿಂಗ್ ಗಾರೆ ಏಕಾಏಕಿ ಕಳಚಿ ಬಿದ್ದಿದೆ. ಇಬ್ಬರು ವಿದ್ಯಾರ್ಥಿಗಳ ತಲೆ ಮತ್ತು ಶಿಕ್ಷಕನ ಭುಜಕ್ಕೆ ಗಾಂಭೀರವಾದ ಗಾಯಗಳಾಗಿವೆ. ಸರ್ಕಾರಿ ಶಾಲಾ ಕೊಠಡಿಯಲ್ಲಿ ಇದ್ದ ಹಲವು ಪೀಠೋಪಕರಣಗಳಿಗೂ ಹಾನಿಯಾಗಿದೆ.
ತಕ್ಷಣ ಗಾಯಗೊಂಡ ಮಕ್ಕಳು ಹಾಗೂ ಶಿಕ್ಷಕನನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 25 ವರ್ಷಗಳ ಹಿಂದೆ ಈ ಒಂದು ಸರ್ಕಾರಿ ಶಾಲೆ ನಿರ್ಮಾಣವಾಗಿತ್ತು ಚಾಲಕಟ್ಟಡ ಶಿಥಿಲಾವಸ್ತೆ ತಲುಪಿದ ಬಗ್ಗೆ ಆರು ತಿಂಗಳ ಹಿಂದೆಯೇ ಮಾಹಿತಿ ಇದ್ದರೂ ಶಿಕ್ಷಣ ಇಲಾಖೆ ನಿರ್ಲಕ್ಷ್ಯ ತೋರಿರುವ ಆರೋಪ ಕೇಳಿ ಬಂದಿದೆ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಶಿಲಜರಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ