ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. 70 ಸಾವಿರ ಲಂಚ ಸ್ವೀಕರಿಸುವ ವೇಳೆ ದೇವನಹಳ್ಳಿ ಪೊಲೀಸ್ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಮಹಿಳಾ ಪಿಎಸ್‌ಐ ಜಗದೇವಿ ಪರಾರಿಯಾಗಿದ್ದಾರೆ.
70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಮಹಿಳೆಯೊಬ್ಬರು ನೀಡಿದ್ದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು.
ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ, ಕಾನ್ಸ್‌ಟೇಬಲ್‌ಗಳಾದ ಮಂಜುನಾಥ್, ಅಮರೇಶ್ ವಿರುದ್ದ ದೂರು ದಾಖಲಾಗಿತ್ತು. ಪೋಕ್ಸೊ ಕೇಸ್‌ನಲ್ಲಿ ಚಾರ್ಜ್‌ಶೀಟ್ ಹಾಕಲು 70 ಸಾವಿರ ಲಂಚ ಕೇಳಿದ್ದರು. ಸದ್ಯ ಲೋಕಾಯುಕ್ತ ದಾಳಿ ವೇಳೆ ಪಿಎಸ್‌ಐ ಜಗದೇವಿ ಹಾಗೂ ಕಾನ್ಸ್‌ಟೇಬಲ್ ಮಂಜುನಾಥ್ ಪರಾರಿಯಾಗಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.