ಹಾಸನ : ಹಾಸನದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಡೆಗರ್ಜೆ ಬಳಿ ಈ ಒಂದು ಘಟನೆ ನಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿ ಚಲಿಸುತ್ತಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಾ. ಶೇಷಾದ್ರಿ ಎಂಬವರಿಗೆ ಸೇರಿದ ಕಿಯಾ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಚಿಕ್ಕಮಂಗಳೂರಿನಿಂದ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು. ಅರೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.