ಬೆಂಗಳೂರು : ಜಾಗತಿಕ ಯುದ್ಧದ ಸನ್ನಿವೇಶದಿಂದಾಗಿ ಕಚ್ಚಾ ವಸ್ತುಗಳ ಬೆಲೆ ಹಾಗೂ ಸಾರಿಗೆ ವೆಚ್ಚದಲ್ಲಿ ಏರಿಕೆಯಾಗಿದ್ದು, ಇದರ ನೇರ ಪರಿಣಾಮ ನಂದಿನಿ ಉತ್ಪನ್ನಗಳ ಮೇಲೆ ಬೀರುವ ಲಕ್ಷಣಗಳು ಕಾಣಿಸುತ್ತಿವೆ. ಹೈನುಗಾರಿಕೆ ವೆಚ್ಚ ಹೆಚ್ಚಾಗಿರುವುದರಿಂದ ಕೆಎಂಎಫ್ (KMF) ದರ ಪರಿಷ್ಕರಣೆಗೆ ಮುಂದಾಗುವ ಸಾಧ್ಯತೆಯಿದೆ ಎಂದು ಬಮುಲ್ ಅಧ್ಯಕ್ಷ ಡಿಕೆ ಸುರೇಶ್ ತಿಳಿಸಿದ್ದಾರೆ.
ಹಾಲು ಒಕ್ಕೂಟಗಳಿಗೆ ಗ್ಯಾಸ್ ಬಳಕೆಯನ್ನು ಶೇ. 55ರಷ್ಟು ಕಡಿಮೆ ಮಾಡುವಂತೆ ಸೂಚಿಸಲಾಗಿದೆ. ಇಲ್ಲವಾದರೆ ಶೇ. 30ರಷ್ಟು ಹೆಚ್ಚುವರಿ ವೆಚ್ಚವನ್ನು ಭರಿಸಬೇಕಾಗುತ್ತದೆ. ಈ ಹೆಚ್ಚುವರಿ ವೆಚ್ಚ ಅಂತಿಮವಾಗಿ ಗ್ರಾಹಕರ ಮೇಲೆ ಬೀಳಲಿದ್ದು, ಇದು ನಂದಿನಿ ಹಾಲು ಉತ್ಪನ್ನಗಳ ಬೆಲೆ ಏರಿಕೆಗೆ ಕಾರಣವಾಗುತ್ತದೆ.ಸರ್ಕಾರ ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.








