ಕೋಲಾರ : ಕೋಲಾರದಲ್ಲಿ ಘೋರ ಘಟನೆ ನಡೆದಿದ್ದು, ಜಿಲ್ಲಾಸ್ಪತ್ರೆಯ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ENT ವಿಭಾಗದ ಕೊಠಡಿಯಲ್ಲಿ ಹರೀಶ್ ಬಾಬು (33) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಹರೀಶ್ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನಾಯಕರಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಡೇಟಾ ಎಂಟ್ರಿ ಆಪರೇಟರ್ ಆಗಿ ಹರೀಶ್ ಬಾಬು ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆ ಕುರಿತು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.