ಶಿವಮೊಗ್ಗ : ರಾಜ್ಯದಲ್ಲಿ ಝೀಕಾ ವೈರಸ್ ನಿಂದ ಇಂದು ಶಿವಮೊಗ್ಗದಲ್ಲಿ ವೃದ್ಧರೊಬ್ಬರೂ ಸಾವನ್ನಪ್ಪಿದ್ದಾರೆ. ಹೌದು ಇಂದು ಶಿವಮೊಗ್ಗ ಜಿಲ್ಲೆಯಲ್ಲಿ 74 ವರ್ಷದ ವೃದ್ಧರು ಸೋಂಕಿಗೆ ಬಲಿಯಾಗಿದ್ದಾರೆ. ಆದರೆ ಇದೀಗ ಅದೆ ಜಿಲ್ಲೆಯಲ್ಲಿ ಯುವಕನಿಗೆ ಝೀಕಾ ಸೋಂಕು ದೃಢವಾಗಿದೆ.
ಹೌದು ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬರಿಗೆ ಝೀಕಾ ವೈರಸ್ ಪತ್ತೆಯಾಗಿದ್ದು, ಸಾಗರದ ಗಾಂಧಿನಗರದ ಯುವಕನಿಗೆ ಝೀಕಾ ವೈರಸ್ ದೃಢವಾಗಿದೆ ಟ್ರಾವೆಲ್ ಹಿಸ್ಟರಿ ಇಲ್ಲದ ಯುವಕನಿಗೆ ಝೀಕಾ ವೈರಸ್ ಪತ್ತೆಯಾಗಿದೆ ಎನ್ನಲಾಗುತ್ತಿದೆ. ಸದ್ಯ ಯುವಕನೇಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಶಿವಮೊಗ್ಗ ಜಿಲ್ಲೆಯ ಗಾಂಧಿ ನಗರದ ನಿವಾಸಿಯ ವೃದ್ಧರು ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದರು.ಜೂನ್ 21ರಂದು ಝೀಕಾ ವೈರಸ್ ಪತ್ತೆಯಾಗಿತ್ತು. ಹಾಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ವೃದ್ಧರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಡಿಸ್ಚಾರ್ಜ್ ಆಗಿದ್ದರು.
ಅದಾದ ಬಳಿಕ ಕುಟುಂಬದವರು ಗುರುವಾರ ಮನೆಗೆ ಕರೆದುಕೊಂಡು ಹೋಗಿದ್ದರು. ನಿನ್ನೆ ಮನೆಯಲ್ಲಿ 74 ವರ್ಷದ ವೃದ್ಧರು ಝೀಕಾ ವೈರಸ್ ನಿಂದ ಮೃತಪಟ್ಟಿದ್ದಾರೆ. ಹೀಗಾಗಿ ಶಿವಮೊಗ್ಗದಲ್ಲಿ ಜೀವ ವೈರಸ್ ಗೆ 74 ವರ್ಷದ ವೃದ್ಧರು ಮೊದಲ ಬಲಿಯಾಗಿದ್ದಾರೆ.ಶಿವಮೊಗ್ಗದ ಗಾಂಧಿನಗರದ ಮನೆಯಲ್ಲಿ ಸಾವನ್ನಪ್ಪಿದ್ದಾರೆ.